ಮುಖಪುಟ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಸಿಸಿಟಿವ್ ವೀಡಿಯೋ ಮಂಗಳೂರು ಸ್ಫೋಟಕೆ ಸಂಬಂಧಿಸಿದ್ದಲ್ಲ

ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಸಿಸಿಟಿವ್ ವೀಡಿಯೋ ಮಂಗಳೂರು ಸ್ಫೋಟಕೆ ಸಂಬಂಧಿಸಿದ್ದಲ್ಲ

ಮೂಲಕ:

ನವೆಂಬರ್ 29 2022

ಲೇಖನ ಹಂಚಿಕೊಳ್ಳಿ: facebook logo twitter logo linkedin logo
ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಸಿಸಿಟಿವ್ ವೀಡಿಯೋ ಮಂಗಳೂರು ಸ್ಫೋಟಕೆ ಸಂಬಂಧಿಸಿದ್ದಲ್ಲ

ಫ್ಯಾಕ್ಟ್ ಚೆಕ್ಸ್

ತೀರ್ಪು ತಪ್ಪು

ಆಟೋ ರಿಕ್ಷಾ ಸ್ಫೋಟದ ಆರೋಪಿ ಶಾರಿಕ್‌ನ ಚಲನವಲನದ ಸಿಸಿಟಿವಿ ದೃಶ್ಯಾವಳಿಗಳು ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಮಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ.


ಸಂದರ್ಭ

ನವೆಂಬರ್ ೧೯, ೨೦೨೨ ರಂದು ಕರ್ನಾಟಕದ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟಗೊಂಡಿತು. ಈ ದಾಳಿಯಲ್ಲಿ ಪ್ರಾಥಮಿಕ ಆರೋಪಿ ಮೊಹಮ್ಮದ್ ಶಾರಿಕ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಸಂತ್ರಸ್ತ ಪುರುಷೋತ್ತಮ್ ಹಾಗೂ ಆರೋಪಿ ಶಾರಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಖಚಿತಪಡಿಸಿದ್ದಾರೆ. ಈ ನಡುವೆ ಅಂಗಡಿ ಮುಂದೆ ಇಬ್ಬರು ನಡೆದುಕೊಂಡು ಹೋಗುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಪ್ರಕರಣಕ್ಕೆ ಸಂಬಂಧಿಸಿವೆ ಎನ್ನಲಾಗಿದ್ದು, ಟ್ವಿಟರ್‌ನಲ್ಲಿ ಹರಿದಾಡುತ್ತಿವೆ. ಹಲವಾರು ಸುದ್ದಿವಾಹಿನಿಗಳು ವೀಡಿಯೋದಲ್ಲಿರುವ ವ್ಯಕ್ತಿ ಮಂಗಳೂರಿನ ಬಾಂಬರ್ ಶಾರಿಕ್ ಎಂದು ಹೇಳಿಕೊಂಡಿವೆ. ರಿಪಬ್ಲಿಕ್ ವರ್ಲ್ಡ್ ಮತ್ತು ಇಂಡಿಯಾ ಟುಡೆ ಅಂತಹ ಮುಖ್ಯ ಸುದ್ದಿವಾಹಿನಿಗಳು ತಮ್ಮ ಯೂಟ್ಯೂಬ್‌ನಲ್ಲಿ ಈ ಸಿಸಿಟಿವಿ ದೃಶ್ಯವನ್ನು ಪ್ರಸಾರ ಮಾಡಿದ್ದು, ಎರಡನೇ ಶಂಕಿತನ ಜೊತೆಗೆ ಶಾರಿಕ್ ದೊಡ್ಡ ಬೆನ್ನುಹೊರೆಯೊಂದಿಗೆ ನಡೆಯುವುದನ್ನು ವೀಡಿಯೋದಲ್ಲಿ ಕಾಣಬಹುದು ಎಂದು ಹೇಳಿಕೊಂಡಿದ್ದಾರೆ. ಆದರೆ ಈ ವೀಡಿಯೋ ಘಟನೆಗೆ ಸಂಬಂಧಿಸಿದ್ದು ಎಂಬುದನ್ನು ಮಂಗಳೂರು ಪೊಲೀಸರು ನಿರಾಕರಿಸಿದ್ದಾರೆ.


ವಾಸ್ತವವಾಗಿ 

ಟ್ವಿಟರ್‌ನಲ್ಲಿ "ಮಂಗಳೂರು ಬ್ಲಾಸ್ಟ್" ಎಂಬ ಕೀವರ್ಡ್ ಹಾಕಿ ಹುಡುಕಿದಾಗ, ನವೆಂಬರ್ ೨೨ ರಂದು ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರ ಟ್ವಿಟ್ಟರ್‌ ಕಂಡುಬಂದಿತು. ಅವರು ವೈರಲ್ ವೀಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಹೀಗೆ ಬರೆದಿದ್ದಾರೆ "ಈ ತಪ್ಪುದಾರಿಗೆಳೆಯುವ ವೀಡಿಯೋ ಇನ್ನೂ ಹರಿದಾಡುತ್ತಿವೆ. ಈ ವೀಡಿಯೋಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಗಳು ಮಂಗಳೂರು ಸ್ಫೋಟದ ಘಟನೆಯಲ್ಲಿ ಭಾಗಿಯಾಗಿಲ್ಲ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ದಯವಿಟ್ಟು ವದಂತಿಗಳಿಗೆ ಕಿವಿಗೊಡಬೇಡಿ. ದಯವಿಟ್ಟು ಬೇಡ. ವದಂತಿಗಳಿಗೆ ಗಮನ ಕೊಡದೆ, ಶಾಂತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡೋಣ" ಎಂದರು.

ಈ ವೀಡಿಯೋ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ರಾಜ್ಯ ಪೊಲೀಸ್ ಫ್ಯಾಕ್ಟ್‌ಚೆಕ್ "ಇತ್ತೀಚೆಗೆ ನಡೆದ ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದ ತನಿಖೆಗೂ ಈ ಸಿಸಿಟಿವಿ ಕ್ಲಿಪ್ಪಿಂಗ್‌ಗೂ ಯಾವುದೇ ಲಿಂಕ್ ಇಲ್ಲ. ಇದು ಸಂಪೂರ್ಣವಾಗಿ ಸಂಪರ್ಕ ಹೊಂದಿಲ್ಲ." ಎಂದು ಹೇಳಿದೆ.

 

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಕೂಡ ಈ ವೀಡಿಯೋ ಕುರಿತು ಟ್ವೀಟ್ ಮಾಡುವ ಮೂಲಕ ಈಗೆ ಹೇಳಿದ್ದಾರೆ "ವೀಡಿಯೋ ಒಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್ ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರುನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿದ್ದು, ಈ ವೀಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿರುವುದಿಲ್ಲ."


ಹಿಂದೂಸ್ತಾನ್ ಟೈಮ್ಸ್, ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್‌ನ (ANI) ಟ್ವೀಟ್ ಅನ್ನು ಉಲ್ಲೇಖಿಸಿ, ಏನ್. ಶಶಿ ಕುಮಾರ್ ಕೂಡ ಈ ದೃಶ್ಯಗಳಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ಮಾಡಿದೆ. ನವೆಂಬರ್ ೧೯ ರಂದು ನಡೆದ ದಾಳಿಯಲ್ಲಿ ಪರಿಶೀಲಿಸದ ವೀಡಿಯೋಗಳನ್ನು ಹಂಚಿಕೊಳ್ಳಬೇಡಿ ಮತ್ತು ಅವುಗಳನ್ನು ಸಂಪರ್ಕಿಸಬೇಡಿ ಎಂದು ಶಶಿಕುಮಾರ್ ಜನರಿಗೆ ಮನವಿ ಮಾಡಿದ್ದಾರೆ ಎಂದು ಟ್ವೀಟ್ ಹೇಳುತ್ತದೆ. ಹಾಗು ಸ್ಫೋಟದಲ್ಲಿ ಆರೋಪಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

 ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸಕ್ರಿಯವಾಗಿದ್ದ ಐಎಸ್‌ನ ಅಲ್-ಹಿಂದ್ ಮಾಡ್ಯೂಲ್‌ನ ಸದಸ್ಯ ಮತೀನ್ ಅಹ್ಮದ್ ತಾಹಾ ಅವರೊಂದಿಗೆ ಶಾರಿಕ್ ಸಂಪರ್ಕ ಹೊಂದಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಲಾಗಿದೆ. ಈ ಪ್ರಕರಣದ ತನಿಖೆಗಾಗಿ ಕರ್ನಾಟಕ ಪೊಲೀಸರು ಐದು ತಂಡಗಳನ್ನು ಸಹ ಪ್ರಾರಂಭಿಸಿದ್ದಾರೆ. ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ.


ತೀರ್ಪು 

ವ್ಯಾಪಕವಾಗಿ ಪ್ರಸಾರವಾದ ವೀಡಿಯೋ ಎಲ್ಲಿದೆ ಎಂಬುದನ್ನು ನಾವು ಸ್ವತಂತ್ರವಾಗಿ ಕಂಡುಹಿಡಿಯಲು ಸಾಧ್ಯವಾಗಲಿಲ್ಲ, ಆದರೆ ಈ ವೀಡಿಯೋ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ