ಮುಖಪುಟ ೨೦೨೪ ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲ್ಲುತ್ತಾರೆ ಎಂದು ರಾಹುಲ್ ಗಾಂಧಿಯವರು ಒಪ್ಪಿಕೊಂಡಂತೆ ಎಡಿಟ್ ಮಾಡಿದ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ

೨೦೨೪ ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲ್ಲುತ್ತಾರೆ ಎಂದು ರಾಹುಲ್ ಗಾಂಧಿಯವರು ಒಪ್ಪಿಕೊಂಡಂತೆ ಎಡಿಟ್ ಮಾಡಿದ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ

ಮೂಲಕ: ರಾಹುಲ್ ಅಧಿಕಾರಿ

ಮೇ 16 2024

ಲೇಖನ ಹಂಚಿಕೊಳ್ಳಿ: facebook logo twitter logo linkedin logo
೨೦೨೪ ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲ್ಲುತ್ತಾರೆ ಎಂದು ರಾಹುಲ್ ಗಾಂಧಿಯವರು ಒಪ್ಪಿಕೊಂಡಂತೆ ಎಡಿಟ್ ಮಾಡಿದ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೊಂಡು ಹಂಚಿಕೊಂಡ ಸಾಮಾಜಿಕ ಮಾಧ್ಯಮ ಪೋಷ್ಟ್ ನ ಸ್ಕ್ರೀನ್‌ಶಾಟ್. (ಮೂಲ: ಎಕ್ಸ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಫ್ಯಾಕ್ಟ್ ಚೆಕ್ಸ್

ತೀರ್ಪು ತಪ್ಪು

ವಾಸ್ತವದಲ್ಲಿ, ಜೂನ್ ೪, ೨೦೨೪ ರ ಚುನಾವಣಾ ಫಲಿತಾಂಶ ಪ್ರಕಟವಾದ ದಿನದ ನಂತರ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಹೇಳಿಕೆ ಏನು?

೨೦೨೪ ರ ಲೋಕಸಭೆ ಚುನಾವಣೆಯ ನಂತರವೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

೫೬ ಸೆಕೆಂಡುಗಳ ವೈರಲ್ ವೀಡಿಯೋದಲ್ಲಿ, ಗಾಂಧಿಯವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, “ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಉಳಿಯುತ್ತಾರೆ. ನಾನು ನಿಮಗೆ ಸತ್ಯವನ್ನು ಹೇಳಲು ಬಯಸುತ್ತೇನೆ, ಜೂನ್ ೪, ೨೦೨೪ ರಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಉಳಿಯುತ್ತಾರೆ. ನೀವು ಅದನ್ನು ಬರವಣಿಗೆಯಲ್ಲಿ ತೆಗೆದುಕೊಳ್ಳಬಹುದು; ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಬಹುದು." ಮತ್ತು   ತಮ್ಮ ಕಾಂಗ್ರೆಸ್ ನ ಮೈತ್ರಿಯಾದ -  ಸಮಾಜವಾದಿ ಪಕ್ಷ (ಎಸ್‌ಪಿ) ಉತ್ತರ ಪ್ರದೇಶದಲ್ಲಿ  ಒಂದು ಸ್ಥಾವನ್ನೂ ಗೆಲ್ಲುವುದಿಲ್ಲ ಎಂದು ಅವರು ಹೇಳುತ್ತಾರೆ.

ಹಲವಾರು ಬಳಕೆದಾರರು ಎಕ್ಸ್ (ಹಿಂದೆ ಟ್ವಿಟ್ಟರ್), ಇನ್‌ಸ್ಟಾಗ್ರಾಮ್  ಮತ್ತು ಯೂಟ್ಯೂಬ್ ನಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಅಂತಹ ಪೋಷ್ಟ್ ಗಳ ಆರ್ಕೈವ್ ಮಾಡಿದ ಆವೃತ್ತಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್‌ಗಳು. (ಮೂಲ: ಎಕ್ಸ್ /ಇನ್‌ಸ್ಟಾಗ್ರಾಮ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಆದರೆ, ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ. ವಾಸ್ತವದಲ್ಲಿ, ಜೂನ್ ೪, ೨೦೨೪ ರ ನಂತರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಗಾಂಧಿ ಹೇಳಿದ್ದಾರೆ.

ವಾಸ್ತವಾಂಶಗಳು

ನಾವು ವೈರಲ್ ವೀಡಿಯೋದ ಕೀಫ್ರೇಮ್‌ಗಳ ಮೇಲೆ ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಮೇ ೧೦ ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ ಸಿ) ನ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಕಟಿಸಲಾದ ಮೂಲ ವೀಡಿಯೋ (ಇಲ್ಲಿ ಆರ್ಕೈವ್) ಕಂಡುಬಂದಿದೆ. ಕಾಂಗ್ರೆಸ್ ನಾಯಕರು INDIA ಘಟಬಂಧನದೊಂದಿಗೆ ಜಾಯಿಂಟ್  ರ‍್ಯಾಲಿಯನ್ನು ನಡೆಸಿದ್ದರು, ಈ ದಿನಾಂಕದಂದು ಕಾನ್ಪುರದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರೂ ಸಹ ಉಪಸ್ಥಿತರಿದ್ದರು.

ವೀಡಿಯೋದಲ್ಲಿ ಸುಮಾರು ಒಂದು ನಿಮಿಷದ ಗುರುತಿನಲ್ಲಿ , ಗಾಂಧಿಯವರು ಹೀಗೆ ಹೇಳುವುದನ್ನು ಕೇಳಬಹುದು, “ಆರಂಭದಲ್ಲಿಯೇ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇದು ಭಾರತೀಯ ಮಾಧ್ಯಮಗಳು ನಿಮಗೆ ಎಂದಿಗೂ ಹೇಳುವುದಿಲ್ಲ ಆದರೆ ಇದು ಸತ್ಯ. ಜೂನ್ ೪, ೨೦೨೪ ರಂದು ನರೇಂದ್ರ ಮೋದಿ ಭಾರತದ ಪ್ರಧಾನಿಯಾಗುವುದಿಲ್ಲ. ಇದನ್ನು ಲಿಖಿತವಾಗಿ ತೆಗೆದುಕೊಳ್ಳಿ, ನರೇಂದ್ರ ಮೋದಿ ಜಿ ಭಾರತದ ಪ್ರಧಾನಿಯಾಗಲು ಸಾಧ್ಯವಿಲ್ಲ. ನಾವು ಮಾಡಬೇಕಾದ್ದನ್ನು ನಾವು ಮಾಡಿದ್ದೇವೆ, ನಾವು ಕಷ್ಟಪಟ್ಟು ಕೆಲಸ ಮಾಡಿದ್ದೇವೆ, ಈಗ ನಮ್ಮ ಮೈತ್ರಿಯು ಉತ್ತರ ಪ್ರದೇಶದಲ್ಲಿ ೫೦ ಕ್ಕಿಂತ ಕಡಿಮೆ ಒಂದು ಸ್ಥಾನವನ್ನು ಪಡೆಯುವುದಿಲ್ಲ ಎಂದು ನೀವು ನೋಡುತ್ತೀರಿ."

೨:೩೦ ನಿಮಿಷದಿಂದ ೨:೪೯ ನಿಮಿಷದ ನಡುವೆ ಮಾಧ್ಯಮಗಳನ್ನು ಉಲ್ಲೇಖಿಸಿ, “ಅವರು ಕೂಡ ನಗುತ್ತಿದ್ದಾರೆ ಏಕೆಂದರೆ ರಾಹುಲ್ ಗಾಂಧಿ ಹೇಳುವುದು ನಿಜ ಮತ್ತು ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಅವರಿಗೂ ತಿಳಿದಿದೆ. ಕಥೆಯ ಅಂತ್ಯ. ನಾವು ಇಂಗ್ಲಿಷ್‌ನಲ್ಲಿ ಹೇಳುವಂತೆ, ವಿದಾಯ, ಧನ್ಯವಾದಗಳು.”

ಗಾಂಧಿಯವರು ಮೋದಿ ಪರವಾಗಿ ಮಾತನಾಡಿದ್ದಾರೆ ಎಂಬ ಭಾವನೆ ಮೂಡಿಸಲು ಮೇಲೆ ದಪ್ಪ ಅಕ್ಷರದಲ್ಲಿ ಬರೆದ ಭಾಗವನ್ನು ಎಡಿಟ್ ಮಾಡಲಾಗಿದೆ. ಆದರೆ, ತಮ್ಮ ಭಾಷಣದುದ್ದಕ್ಕೂ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಹಲವಾರು ಬಾರಿ ಪುನರುಚ್ಚರಿಸಿದ್ದಾರೆ. 

ತೀರ್ಪು

೨೦೨೪ ರ ಲೋಕಸಭೆ ಚುನಾವಣೆಯ ನಂತರ ಮೋದಿ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಎಡಿಟ್ ಮಾಡಿದ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಸ್ತವವಾಗಿ, ಕಾಂಗ್ರೆಸ್ ನಾಯಕರು ಇದಕ್ಕೆ ವಿರುದ್ಧವಾಗಿ ಹೇಳಿದ್ದಾರೆ. ಆದ್ದರಿಂದ, ನಾವು ಈ ಹೇಳಿಕೆಯನ್ನು ತಪ್ಪು ಎಂದು ಗುರುತಿಸಿದ್ದೇವೆ.

(ಅನುವಾದಿಸಿದವರು: ಅಂಕಿತಾ ಕುಲಕರ್ಣಿ )

Read this fact-check in English here

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ