ಮುಖಪುಟ ೨೦೨೩ ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡದ ವೀಡಿಯೋವನ್ನು ಪ್ಯಾರಿಸ್ ಒಲಿಂಪಿಕ್ಸ್‌ಗೆ ಲಿಂಕ್ ಮಾಡಲಾಗಿದೆ

೨೦೨೩ ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡದ ವೀಡಿಯೋವನ್ನು ಪ್ಯಾರಿಸ್ ಒಲಿಂಪಿಕ್ಸ್‌ಗೆ ಲಿಂಕ್ ಮಾಡಲಾಗಿದೆ

ಮೂಲಕ: ಉಮ್ಮೆ ಕುಲ್ಸುಮ್

ಜುಲೈ 30 2024

ಲೇಖನ ಹಂಚಿಕೊಳ್ಳಿ: facebook logo twitter logo linkedin logo
೨೦೨೩ ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡದ ವೀಡಿಯೋವನ್ನು ಪ್ಯಾರಿಸ್ ಒಲಿಂಪಿಕ್ಸ್‌ಗೆ ಲಿಂಕ್ ಮಾಡಲಾಗಿದೆ ಪ್ಯಾರಿಸ್ ಒಲಿಂಪಿಕ್ಸ್‌ನ ವೀಡಿಯೋ ಎಂದು ಹಂಚಿಕೊಂಡ ಪೋಷ್ಟ್ ನ ಸ್ಕ್ರೀನ್‌ಶಾಟ್. (ಮೂಲ: ಎಕ್ಸ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಫ್ಯಾಕ್ಟ್ ಚೆಕ್ಸ್

ತೀರ್ಪು ತಪ್ಪು

ಬುಡಾಪೆಸ್ಟ್‌ನಲ್ಲಿ ೨೦೨೩ ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ೪x೪೦೦ ಮೀ ರಿಲೇಯನ್ನು ಈ ವೀಡಿಯೋ ತೋರಿಸುತ್ತದೆ, ೨೦೨೪ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಂಬಂಧಿಸಿಲ್ಲ.

ಹೇಳಿಕೆ  ಏನು? 

೨೦೨೪ ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಪುರುಷರ ೪x೪೦೦ ಮೀಟರ್ (ಮೀ) ರಿಲೇ ತಂಡವು ಅರ್ಹತೆ ಪಡೆಯುತ್ತಿರುವುದನ್ನು ಚಿತ್ರಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚುಕೊಳ್ಳಲಾಗುತ್ತಿದೆ. ಇಂಗ್ಲಿಷ್‌ಗೆ ಅನುವಾದಿಸಲಾದ ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿನ ಪೋಷ್ಟ್ ನ ಶೀರ್ಷಿಕೆ ಹೀಗಿದೆ: "ಭಾರತೀಯ ಪುರುಷರ ೪x೪೦೦ ಮೀ ರಿಲೇ ತಂಡವು ಒಲಿಂಪಿಕ್ ಕ್ರೀಡಾಕೂಟದ ಅರ್ಹತೆಯಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದೆ."

ಅದೇ ರೀತಿಯ ಪೋಷ್ಟ್ ಗಳ ಆರ್ಕೈವ್ ಮಾಡಿದ ಆವೃತ್ತಿಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಇದೇ ರೀತಿಯ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಅದರ ಆರ್ಕೈವ್ ಮಾಡಿದ ಆವೃತ್ತಿಗಳು ಇಲ್ಲಿ ಮತ್ತು ಇಲ್ಲಿ ಲಭ್ಯವಿದೆ.

ಭಾರತೀಯ ನಟ ಅನುಪಮ್ ಖೇರ್ ಮತ್ತು ಪುದುಚೇರಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಕೂಡ ಈ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ, ಇದು ಭಾರತೀಯ ಪುರುಷರ ೪ಸx೪೦೦ ರಿಲೇ ತಂಡವು #OlympicGames ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ಗೆ ಅರ್ಹತೆ ಪಡೆದಿದೆ ಎಂದು ಸೂಚಿಸುತ್ತದೆ.

ಆದರೆ, ಖೇರ್ ಮತ್ತು ಬೇಡಿ ಇಬ್ಬರೂ ನಂತರ ಅದೇ ಥ್ರೆಡ್‌ನಲ್ಲಿ ವೀಡಿಯೋ ಹಳೆಯದು ಎಂದು ಒಪ್ಪಿಕೊಂಡರು, ಆದರೂ ಅವರು ತಮ್ಮ ಪೋಷ್ಟ್ ಗಳನ್ನು ಡಿಲೀಟ್ ಮಾಡಿಲ್ಲ. ಈ ಪೋಷ್ಟ್ ಗಳ ಆರ್ಕೈವ್ ಮಾಡಿದ ಆವೃತ್ತಿಗಳು ಇಲ್ಲಿ ಮತ್ತು ಇಲ್ಲಿ ಲಭ್ಯವಿದೆ.

 ಆನ್‌ಲೈನ್‌ನಲ್ಲಿ ಮಾಡಿದ ಹೇಳಿಕೆಗಳ  ಸ್ಕ್ರೀನ್‌ಶಾಟ್. (ಮೂಲ: ಎಕ್ಸ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

 ಆದರೆ, ವೈರಲ್ ಕ್ಲಿಪ್ ಹಳೆಯದು ಮತ್ತು ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಂಬಂಧಿಸಿಲ್ಲ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ.

ನಾವು ಕಂಡುಕೊಂಡದ್ದು ಏನು?

ವೀಡಿಯೋದಿಂದ ವಿವಿಧ ಕೀಫ್ರೇಮ್‌ಗಳ ಮೇಲೆ ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ , ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರಿಯಾನ್ ಆಗಸ್ಟ್ ೨೭, ೨೦೨೩ ರಂದು ಎಕ್ಸ್ ನಲ್ಲಿ ಅದೇ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ (ಇಲ್ಲಿ ಆರ್ಕೈವ್ ಮಾಡಲಾಗಿದೆ) ಎಂದು ಲಾಜಿಕಲಿ ಫ್ಯಾಕ್ಟ್ಸ್ ಕಂಡುಹಿಡಿದಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ ೨೭, ೨೦೨೩ ರಂದು ಇದೇ ಕಾರ್ಯಕ್ರಮದ ವೀಡಿಯೋವನ್ನು ಪೋಷ್ಟ್ ಮಾಡಿದ್ದಾರೆ,ಹಾಗು ಅದು ಇದೇ ರೀತಿಯ ದೃಶ್ಯಗಳನ್ನು ಒಳಗೊಂಡಿತ್ತು ಮತ್ತು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ-ಮೂರನೇ ಸ್ಥಾನ ಗಳಿಸಿದ ಟೀಮ್ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಮೋದಿಯವರ ವೀಡಿಯೋದ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಹೆಚ್ಚಿನ ಸಂಶೋಧನೆಯು ಬ್ರೌನ್ ಬ್ಯಾಲರ್ಸ್ ಹೆಸರಿನ ಯೂಟ್ಯೂಬ್ ಚಾನಲ್‌ಗೆ ನಮ್ಮನ್ನು ಕರೆದೊಯ್ಯಿತು (ಇಲ್ಲಿ ಆರ್ಕೈವ್ ಮಾಡಲಾಗಿದೆ), ಅದು ಅದೇ ವೀಡಿಯೋವನ್ನು ಆಗಸ್ಟ್ ೨೭, ೨೦೨೩ ರಂದು ಪ್ರಕಟಿಸಿದೆ. ಈಗ ವೈರಲ್ ವೀಡಿಯೋ ೨೦೨೪ ರ ಒಲಿಂಪಿಕ್ಸ್‌ಗಿಂತ ಹಿಂದಿನದು ಎಂದು ಇದು ಖಚಿತಪಡಿಸುತ್ತದೆ.

ವೈರಲ್ ಕ್ಲಿಪ್ ಮತ್ತು ಯೂಟ್ಯೂಬ್ ವೀಡಿಯೋದ ದೃಶ್ಯಗಳ ಹೋಲಿಕೆ. (ಮೂಲ: ಎಕ್ಸ್/ಯೂಟ್ಯೂಬ್)

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗಳನ್ನು ಒಳಗೊಂಡ ಆಗಸ್ಟ್ ೨೦೨೩ ರಿಂದ ಹಲವಾರು ಮುಖ್ಯವಾಹಿನಿಯ ಮಾಧ್ಯಮ ವರದಿಗಳನ್ನೂ ಸಹ ನಾವು ಕಂಡುಕೊಂಡಿದ್ದೇವೆ. ಈ ಸಂದರ್ಭದಲ್ಲಿ, ಪುರುಷರ ೪x೪೦೦ ಮೀ ರಿಲೇಯಲ್ಲಿ ಭಾರತ ಹೊಸ ಏಷ್ಯನ್ ದಾಖಲೆಯನ್ನು ಸ್ಥಾಪಿಸಿತು ಮತ್ತು ಫೈನಲ್‌ಗೆ ಅರ್ಹತೆ ಗಳಿಸಿತು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ಈವೆಂಟ್‌ಗಳು ಇನ್ನೂ ಪ್ರಾರಂಭವಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಅಧಿಕೃತ ಪ್ಯಾರಿಸ್ ಒಲಿಂಪಿಕ್ಸ್ ವೇಳಾಪಟ್ಟಿಯ ಪ್ರಕಾರ, ಎಲ್ಲಾ ಅಥ್ಲೆಟಿಕ್ಸ್ ಈವೆಂಟ್‌ಗಳು ಆಗಸ್ಟ್ ೧, ೨೦೨೪ ರಂದು ಪ್ರಾರಂಭವಾಗಲಿದ್ದು, ೪ಸx೪೦೦ ಮೀ ಪುರುಷರ ರಿಲೇಯನ್ನು ಆಗಸ್ಟ್ ೯, ೨೦೨೪ ರಂದು ನಿಗದಿಪಡಿಸಲಾಗಿದೆ.

ತೀರ್ಪು

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡವು ಪುರುಷರ ರಿಲೇಗೆ ಅರ್ಹತೆ ಪಡೆದಿರುವುದನ್ನು ತೋರಿಸುವ ವೈರಲ್ ಕ್ಲಿಪ್ ಅನ್ನು ಭಾರತವು ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ಗೆ ಅರ್ಹತೆ ಪಡೆದಿದೆ ಎಂಬುದಕ್ಕೆ ಸಾಕ್ಷಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

(ಅನುವಾದಿಸಿದವರು: ಅಂಕಿತಾ ಕುಲಕರ್ಣಿ) 

Read this fact-check in English here

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ