ಮುಖಪುಟ ಕಾಂಗ್ರೆಸ್ ಯುವ ಘಟಕದ ಪ್ರತಿಭಟನೆಯ ವೀಡಿಯೋವನ್ನು ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ತಪ್ಪಾಗಿ ಲಿಂಕ್ ಮಾಡಲಾಗಿದೆ

ಕಾಂಗ್ರೆಸ್ ಯುವ ಘಟಕದ ಪ್ರತಿಭಟನೆಯ ವೀಡಿಯೋವನ್ನು ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ತಪ್ಪಾಗಿ ಲಿಂಕ್ ಮಾಡಲಾಗಿದೆ

ಮೂಲಕ: ರಜಿನಿ ಕೆ.ಜಿ

ಫೆಬ್ರವರಿ 21 2024

ಲೇಖನ ಹಂಚಿಕೊಳ್ಳಿ: facebook logo twitter logo linkedin logo
ಕಾಂಗ್ರೆಸ್ ಯುವ ಘಟಕದ ಪ್ರತಿಭಟನೆಯ ವೀಡಿಯೋವನ್ನು ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ತಪ್ಪಾಗಿ ಲಿಂಕ್ ಮಾಡಲಾಗಿದೆ ಆನ್‌ಲೈನ್‌ನಲ್ಲಿ ಹಂಚಿಕೊಂಡ ವೈರಲ್ ವೀಡಿಯೋದ ಸ್ಕ್ರೀನ್‌ಶಾಟ್. (ಮೂಲ: ಎಕ್ಸ್/ಫೇಸ್‌ಬುಕ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಫ್ಯಾಕ್ಟ್ ಚೆಕ್ಸ್

ತೀರ್ಪು ತಪ್ಪು

ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಭೋಪಾಲ್‌ನಲ್ಲಿ ಯುವ ಕಾಂಗ್ರೆಸ್ ಸದಸ್ಯರು ನಡೆಸಿದ ಪ್ರತಿಭಟನೆಯನ್ನು ವೀಡಿಯೋ ತೋರಿಸುತ್ತದೆ, ರೈತರ ಮೇಲಿನ 'ದುಷ್ಕೃತ್ಯವನ್ನು' ತೋರಿಸುವುದಿಲ್ಲ

ಹೇಳಿಕೆ ಏನು?

ಭಾರತದಲ್ಲಿ ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಪ್ರತಿಭಟನಾಕಾರರನ್ನು ಹೇಗೆ 'ದುಷ್ಕೃತ್ಯ' ನಡೆಸುತ್ತಿದೆ ಎಂಬುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪ್ರತಿಭಟನಕಾರರ ವಿರುದ್ಧ ನೀರಿನ ಕ್ಯಾನನ್‌ಗಳನ್ನು ನಿಯೋಜಿಸಲಾಗಿದೆ ಮತ್ತು ಅವರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಿರುವುದನ್ನು ತೋರಿಸುವ ಮೂರು ಕ್ಲಿಪ್‌ಗಳ ಚಿತ್ರಣವು ವೀಡಿಯೋವಾಗಿದೆ. ಪೊಲೀಸ್ ಸಿಬ್ಬಂದಿ ಕೆಲವು ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಸಹ ಇದು ತೋರಿಸುತ್ತದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಲಿಂಕ್‌ನಲ್ಲಿ ವೀಡಿಯೋವನ್ನು ಹಂಚಿಕೊಳ್ಳುವ ಪೋಷ್ಟ್  ಗಳ ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.


ವೈರಲ್ ವೀಡಿಯೋವನ್ನು ಹಂಚಿಕೊಳ್ಳುವ ಆನ್‌ಲೈನ್ ಪೋಷ್ಟ್‌ಗಳು. (ಮೂಲ: ಎಕ್ಸ್/ಫೇಸ್‌ಬುಕ್/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಆದರೆ, ವೈರಲ್ ವೀಡಿಯೋದಲ್ಲಿ ಹಂಚಿಕೊಳ್ಳಲಾದ ಕ್ಲಿಪ್‌ಗಳು ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಿಂದ ಬಂದಿವೆ. ರೈತರ ಪ್ರತಿಭಟನೆಗೂ ಇದಕ್ಕೂ ಸಂಬಂಧವಿಲ್ಲ.

ಸತ್ಯ ಏನು?

ಭೋಪಾಲ್‌ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ (ಗ್ರ್ಯಾಂಡ್ ಓಲ್ಡ್ ಪಾರ್ಟಿಯ ಯುವ ವಿಭಾಗ) ಸದಸ್ಯರು ಪ್ರತಿಭಟನೆ ನಡೆಸಿದರು ಎಂದು ವೈರಲ್ ವೀಡಿಯೋದ ಆಡಿಯೋ ಹೇಳುತ್ತದೆ. ಕ್ಲಿಪ್‌ ಮೇಲಿನ ಬಲ ಮೂಲೆಯಲ್ಲಿರುವ ಲೋಗೋ, "ಭಾರತ್ ಜೋಡೋ ನ್ಯಾಯ್ ಯಾತ್ರೆ" ಮತ್ತು "ರೋಜ್ಗರ್ ದೋ ನ್ಯಾಯ್ ದೋ" ಎಂದು ಬರೆಯಲಾಗಿದೆ.

ಫೆಬ್ರವರಿ ೧೩ ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಬಿವಿ ಅವರ ಎಕ್ಸ್ ಖಾತೆಯಲ್ಲಿ ಅದೇ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ ಮತ್ತು ಅದರ ಶೀರ್ಷಿಕೆ, "ಇಂದು, ಭೋಪಾಲ್‌ನಲ್ಲಿ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ನಿರುದ್ಯೋಗದ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಕ್ರಿಯೆ ಮುಂದುವರೆದಿದೆ. ನೀರಿನ ಫಿರಂಗಿಗಳನ್ನು ಬಳಸಿ, ಲಾಠಿಗಳನ್ನು ಬಳಸಿ ಆದರೆ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಿ ಮತ್ತು ನ್ಯಾಯವನ್ನು ನೀಡಿ (ಹಿಂದಿಯಿಂದ ಅನುವಾದಿಸಲಾಗಿದೆ)."

(ಮೂಲ: ಎಕ್ಸ್)

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಈ ಪ್ರತಿಭಟನೆಯ ದೃಶ್ಯಗಳನ್ನು ಇಂಡಿಯನ್ ಯೂತ್ ಕಾಂಗ್ರೆಸ್ ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತು ಇಂಡಿಯಾ ಟುಡೇ ನ್ಯೂಸ್ ಚಾನೆಲ್ ಯೂಟ್ಯೂಬ್‌ನಲ್ಲಿ ಪೋಷ್ಟ್ ಮಾಡಿದೆ. ಈ ದೃಶ್ಯಗಳು ಪ್ರಶ್ನೆಯಲ್ಲಿರುವ ವೈರಲ್ ವೀಡಿಯೋದ ದೃಶ್ಯಗಳಿಗೆ ಹೊಂದಿಕೆಯಾಗುತ್ತವೆ.

ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಫೆಬ್ರವರಿ ೧೩ ರಂದು ರಾಜ್ಯ ಬಿಜೆಪಿ ಸರ್ಕಾರವು ನಿರುದ್ಯೋಗ ಮತ್ತು ಈಡೇರಿಸದ ಪ್ರಣಾಳಿಕೆಯ ಭರವಸೆಗಳ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಶ್ರೀನಿವಾಸ್ ಬಿವಿ ಸೇರಿದಂತೆ ಹಲವು ಯುವ ಕಾಂಗ್ರೆಸ್ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಬ್ಯಾರಿಕೇಡ್‌ಗಳು ಮತ್ತು ಜಲಫಿರಂಗಿಗಳನ್ನು ಬಳಸಿದರು ಮತ್ತು ಅವರಲ್ಲಿ ಹಲವರನ್ನು ಬಂಧಿಸಿದರು ಎಂದು ವರದಿ ತಿಳಿಸುತ್ತದೆ. 

ಜನವರಿ ೧೪ ರಂದು ಮಣಿಪುರದಿಂದ ಆರಂಭವಾದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ರಾಜಕೀಯ ಪಾದಯಾತ್ರೆ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಯ ಅಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಪ್ರಕಾರ, ರ‍್ಯಾಲಿಯು ಭಾರತದಲ್ಲಿನ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಯಾತ್ರೆಯು ೬,೦೦೦ ಕಿ.ಮೀ.ಗೂ ಹೆಚ್ಚು ಕ್ರಮಿಸಲಿದ್ದು, ಮುಂಬೈನಲ್ಲಿ ಕೊನೆಗೊಳ್ಳಲಿದೆ.

ಮುಂದುವರಿದ ರೈತರ ಪ್ರತಿಭಟನೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ತಮ್ಮ ಬೇಡಿಕೆಗಳನ್ನು ನವೀಕರಿಸಲು ತಮ್ಮ ಸುದೀರ್ಘ ಪ್ರತಿಭಟನೆಯನ್ನು ನಿಲ್ಲಿಸಿದ ರೈತರು, ಎರಡು ವರ್ಷಗಳ ನಂತರ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ರಾಜಧಾನಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ರಾಜಧಾನಿ ಗಡಿಯಲ್ಲಿ ಬ್ಯಾರಿಕೇಡ್‌ಗಳು, ತಂತಿಗಳು ಮತ್ತು ಮೊಳೆಗಳನ್ನು ನಿಯೋಜಿಸಿದ್ದಾರೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ.

ರೈತರ ವಿರುದ್ಧ ಬಲಪ್ರಯೋಗ ಮಾಡಲಾಗಿದ್ದರೂ, ವೈರಲ್ ವೀಡಿಯೋ ಅವರ ಪ್ರತಿಭಟನೆಗೂ ಸಂಬಂಧವಿಲ್ಲ.

ತೀರ್ಪು

ಪ್ರತಿಭಟನಾಕಾರರನ್ನು ಚದುರಿಸಲು ಭೋಪಾಲ್‌ನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿಗಳನ್ನು ಬಳಸಿದ ವೀಡಿಯೋವನ್ನು ರೈತರ ಆಂದೋಲನದ ದೃಶ್ಯಗಳನ್ನು ತೋರಿಸುತ್ತದೆ ಎಂಬ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಆದ್ದರಿಂದ, ನಾವು ಈ ಹೇಳಿಕೆಯನ್ನು ತಪ್ಪು ಎಂದು ಗುರುತಿಸಿದ್ದೇವೆ.

Read this fact-check in English here.

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ