ಮುಖಪುಟ ಇಲ್ಲ, ಭಾರತದ ಸುಪ್ರೀಂ ಕೋರ್ಟ್ ಎಲ್ಲಾ ಪಟಾಕಿಗಳ ಬಳಕೆಯನ್ನು ನಿಷೇಧಿಸಿಲ್ಲ

ಇಲ್ಲ, ಭಾರತದ ಸುಪ್ರೀಂ ಕೋರ್ಟ್ ಎಲ್ಲಾ ಪಟಾಕಿಗಳ ಬಳಕೆಯನ್ನು ನಿಷೇಧಿಸಿಲ್ಲ

ಮೂಲಕ: ರಜಿನಿ ಕೆ.ಜಿ

ನವೆಂಬರ್ 9 2023

ಲೇಖನ ಹಂಚಿಕೊಳ್ಳಿ: facebook logo twitter logo linkedin logo
ಇಲ್ಲ, ಭಾರತದ ಸುಪ್ರೀಂ ಕೋರ್ಟ್ ಎಲ್ಲಾ ಪಟಾಕಿಗಳ ಬಳಕೆಯನ್ನು ನಿಷೇಧಿಸಿಲ್ಲ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್‌ಗಳು.(ಮೂಲ: ಎಕ್ಸ್/ಫೇಸ್‌ಬುಕ್/ಸ್ಕ್ರೀನ್‌ಶಾಟ್‌ಗಳು/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಫ್ಯಾಕ್ಟ್ ಚೆಕ್ಸ್

ತೀರ್ಪು ಸಂದರ್ಭದಿಂದ ಹೊರಗಿಡಲಾಗಿದೆ

ನಿಷೇಧಿತ ರಾಸಾಯನಿಕಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ. ಹಸಿರು ಪಟಾಕಿಗಳನ್ನು ಬಳಸಲು ನ್ಯಾಯಾಲಯವು ಅನುಮತಿ ನೀಡಿದೆ.

ಇಲ್ಲಿನ ಹೇಳಿಕೆ ಏನು?

ಹಿಂದೂಗಳು, ಸಿಖ್ಖರು ಮತ್ತು ಜೈನರು ಆಚರಿಸುವ ಹಬ್ಬವಾದ ದೀಪಾವಳಿಗೆ ಮುಂಚಿತವಾಗಿ ಭಾರತದ ಸುಪ್ರೀಂ ಕೋರ್ಟ್ (ಸರ್ವೋಚ್ಚ ನ್ಯಾಯಾಲಯ) ಎಲ್ಲಾ ಪಟಾಕಿಗಳ ಮೇಲೆ ನಿಷೇಧವನ್ನು ವಿಧಿಸಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.  ಹಲವಾರು ಬಳಕೆದಾರವು ಈ ನಿಷೇಧವನ್ನು ನವೆಂಬರ್ ೭ ರಂದು ನೀಡಲಾದ ತೀರ್ಪಿನಲ್ಲಿ ಹೇರಲಾಗಿದೆ ಎಂದು ನಂಬಿದ್ದಾರೆ ಮತ್ತು ಅದನ್ನು "ಹಿಂದೂ-ವಿರೋಧಿ" ಎಂದು ಕರೆದಿದ್ದಾರೆ.

ಎಕ್ಸ್‌ (ಹಿಂದೆ ಟ್ವಿಟ್ಟರ್) ನಲ್ಲಿ ಬಳಕೆದಾರರು ಹಿಂದಿಯಲ್ಲಿ ಹೀಗೆ ಬರೆದಿದ್ದಾರೆ," ಹಿಂದೂಗಳೇ ಇಡೀ ದೇಶದಲ್ಲಿ ಪಟಾಕಿಗಳನ್ನು ನಿಷೇಧಿಸಲಾಗಿದೆ, ಈ ಬಾರಿ ನೀವು ಒಂದೇ ಒಂದು ಪಟಾಕಿಯನ್ನು ಸಹ ಸಿಡಿಸಲಾಗುವುದಿಲ್ಲ !! ಸುಪ್ರೀಂ ಕೋರ್ಟ್ನ ಆದೇಶ ಬಂದಿದೆ !! ( ಅನುವಾದಿಸಲಾಗಿದೆ)." ಪೋಷ್ಟ್ ನ ಆರ್ಕೈವ್ ಲಿಂಕ್ ಅನ್ನು ಇಲ್ಲಿ ವೀಕ್ಷಿಸಬಹುದು. ಅದೇ ನಿರೂಪಣೆಯನ್ನು ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ. ಅಂತಹ ಪೋಷ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ವೀಕ್ಷಿಸಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್‌ಗಳು.
(ಮೂಲ: ಎಕ್ಸ್/ಫೇಸ್‌ಬುಕ್/ಸ್ಕ್ರೀನ್‌ಶಾಟ್‌ಗಳು/ಲಾಜಿಕಲಿ ಫ್ಯಾಕ್ಟ್ಸ್‌ನಿಂದ ಮಾರ್ಪಡಿಸಲಾಗಿದೆ)

ಆದರೆ, ಈ ಹೇಳಿಕೆಯನ್ನು ಸಂದರ್ಭದಿಂದ ಹೊರಗಿಡಲಾಗಿದೆ. ಸುಪ್ರೀಂ ಕೋರ್ಟ್ ಎಲ್ಲಾ ಪಟಾಕಿಗಳ ಮೇಲೆ ನಿಷೇಧವನ್ನು ವಿಧಿಸಿಲ್ಲ ಮತ್ತು ಕೋರ್ಟ್ ನ ಆದೇಶವನ್ನು ತಪ್ಪಾದ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ವಾಸ್ತವವಾಗಿ

ನವೆಂಬರ್ ೭ ರಂದು ನ್ಯಾಯಮೂರ್ತಿಗಳಾದ ಎ.ಎಸ್ ಬೋಪಣ್ಣ ಮತ್ತು ಎಂ.ಎಂ ಸುಂದ್ರೇಶ್ ಅವರ ಬೆಂಚ್ ಹೊರಡಿಸಲಾದ ಸುಪ್ರೀಂ ಕೋರ್ಟ್ ಆದೇಶವನ್ನು ಲಾಜಿಕಲಿ ಫ್ಯಾಕ್ಟ್ಸ್ ಕಂಡುಕೊಂಡಿದೆ. ಉತ್ತರ ಭಾರತದ ರಾಜ್ಯವಾದ ರಾಜಸ್ಥಾನದಲ್ಲಿ ವಾಯು ಮತ್ತು ಶಬ್ದ ಮಾಲಿನ್ಯ  ಹಾಗು ಹಬ್ಬಗಳ ಸಮಯದಲ್ಲಿ ಪಟಾಕಿಗಳ ಬಳಕೆಯನ್ನು ಕಡಿಮೆ ಮಾಡಲು ನಿರ್ದೇಶನಗಳನ್ನು ಕೋರಿದ ಮನವಿಯನ್ನು ಈ ಆದೇಶವು ಉದ್ದೇಶಿಸಿದೆ. ಮನವಿಗೆ ಪ್ರತಿಕ್ರಿಯೆಯಾಗಿ, ನ್ಯಾಯಾಲಯವು, "ಅರ್ಜಿಯನ್ನು ವ್ಯವಹರಿಸುವ ಸಂದರ್ಭದಲ್ಲಿ ಈ ನ್ಯಾಯಾಲಯವು ಗಾಳಿ ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆಗೊಳಿಸುವ ಕ್ರಮಗಳನ್ನು ಸೂಚಿಸಿರುವ ಹಲವಾರು ಆದೇಶಗಳನ್ನು ಜಾರಿಗೊಳಿಸಿರುವುದರಿಂದ ಈ ಅರ್ಜಿಯಲ್ಲಿ ಯಾವುದೇ ನಿರ್ದಿಷ್ಟ ಆದೇಶಗಳ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ."

ಮತ್ತು ಸುಪ್ರೀಂ ಕೋರ್ಟ್ ನ ತೀರ್ಪಿನಲ್ಲಿ, "ಆದ್ದರಿಂದ, ರಾಜಸ್ಥಾನ ರಾಜ್ಯವೂ ಇದನ್ನು ಗಮನಿಸುತ್ತದೆ ಮತ್ತು ಹಬ್ಬದ ಋತುವಿನಲ್ಲಿ ಮಾತ್ರವಲ್ಲದೆ ನಂತರವೂ ವಾಯು/ಶಬ್ದ ಮಾಲಿನ್ಯವನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ," ಎಂದು ಹೇಳಿದೆ. ಪಟಾಕಿಯ ಮೇಲಿನ ಹಿಂದಿನ ಆದೇಶವು ಕೇವಲ ನವದೆಹಲಿಗೆ ಮಾತ್ರವಲ್ಲದೆ ದೇಶದ ಎಲ್ಲಾ ರಾಜ್ಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯವು ಒತ್ತಿಹೇಳಿದೆ.

ಇದರಲ್ಲಿ ಗಮನಿಸಬೇಕಾದ ಸಂಗತಿ ಏನೆಂದರೆ, ಸುಪ್ರೀಂ ಕೋರ್ಟ್ ತನ್ನ ೨೦೨೧ ರ ಆದೇಶವನ್ನು ಅವಲಂಬಿಸಿದೆ. ಅದರಲ್ಲಿ ೨೦೧೮ರ  ತನ್ನ ಹಿಂದಿನ ತೀರ್ಪನ್ನು ಉಲ್ಲೇಖಿಸಿ ಬೇರಿಯಂ ಲವಣಗಳು ಮತ್ತು ನಿಷೇಧಿತ ರಾಸಾಯನಿಕಗಳೊಂದಿಗೆ ಪಟಾಕಿಗಳ ಬಳಕೆಯನ್ನು ನಿಷೇಧಿಸಿದೆ ಆದರೆ ಹಸಿರು ಪಟಾಕಿಗಳನ್ನು ಅನುಮತಿಸಿದೆ.

೨೦೧೮ ಮತ್ತು ೨೦೨೧ ರಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಅಕ್ಟೋಬರ್ ೨೩, ೨೦೧೮ ರಂದು, ನ್ಯಾಯಮೂರ್ತಿಗಳಾದ ಎಕೆ ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರ ಸುಪ್ರೀಂ ಕೋರ್ಟ್ ಬೆಂಚ್  ವಾಯುಮಾಲಿನ್ಯವನ್ನು ತಡೆಯಲು ನವದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ದೀಪಾವಳಿಯ ಸಮಯದಲ್ಲಿ ಯಾವುದೇ ರೀತಿಯ ಪಟಾಕಿಗಳ ಬಳಕೆಯನ್ನು ನಿಷೇಧಿಸಲು ನಿರ್ದೇಶನಗಳನ್ನು ಕೋರಿ ಅರ್ಜಿಗಳ ಮೇಲೆ ಆದೇಶವನ್ನು ಪ್ರಕಟಿಸಿತು. ಲಾಜಿಕಲಿ ಫ್ಯಾಕ್ಟ್ಸ್ ಕಂಡುಕೊಂಡ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಪೀಠವು ಪಟಾಕಿಗಳ ಬಳಕೆಗೆ ನಿರ್ದೇಶನಗಳನ್ನು ನೀಡಿತ್ತು - ಇದು ಕಡಿಮೆ ಮಾಲಿನ್ಯಕಾರಕಗಳನ್ನು ಬಿಡುಗಡೆ ಮಾಡುವ ಹಸಿರು ಪಟಾಕಿಗಳ ಬಳಕೆಗೆ ಅನುಮತಿ ನೀಡಿದೆ ಮತ್ತು ಆರ್ಸೆನಿಕ್, ಆಂಟಿಮನಿ, ಸೀಸ, ಪಾದರಸ, ಬೇರಿಯಮ್ ಲವಣಗಳು ಹಾಗೂ 'ಸೇರಿದ' ಪಟಾಕಿಗಳು (ಸರಣಿ) ಹಾಗೂ ಲಿಥಿಯಂನಂತಹ ನಿಷೇಧಿತ ರಾಸಾಯನಿಕಗಳೊಂದಿಗೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ದೀಪಾವಳಿ, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾದಿನದಂದು ಪಟಾಕಿ ಸಿಡಿಸುವ ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ಸಹ ನ್ಯಾಯಾಲಯವು ನೀಡಿತ್ತು. 

ಭಾರತದಲ್ಲಿ ಪಟಾಕಿಗಳ ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದ ನಂತರ, ನ್ಯಾಯಾಲಯವು ಅಕ್ಟೋಬರ್ ೨೯, ೨೦೨೧ ರಂದು ತನ್ನ ೨೦೧೮ ರ ಆದೇಶವನ್ನು ಎತ್ತಿಹಿಡಿದು ಅದರ ತೀರ್ಪು ಕೇವಲ ನವದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಿಗೆ ಮಾತ್ರ  ಸೀಮಿತಪಟ್ಟಿಲ್ಲ, ಅದು ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ ಎಂದು ನಿರ್ದೇಶಿಸಿತು.

ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರದ ಮತ್ತು ಕಡಿಮೆ ಮಾಲಿನ್ಯಕಾರಕಗಳನ್ನು ಹೊಂದಿರುವ ಹಸಿರು ಪಟಾಕಿಗಳನ್ನು ದೀಪಾವಳಿಯ ಸಮಯದಲ್ಲಿ ಅನುಮತಿಸಲಾಗಿದೆ ಮತ್ತು ಹಾನಿಕಾರಕ ಮತ್ತು ಮಾಲಿನ್ಯಕಾರಕ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಇದು ಸ್ಪಷ್ಟಪಡಿಸುತ್ತದೆ.

ತೀರ್ಪು

ವಾಯು ಮಾಲಿನ್ಯವನ್ನು ನಿಯಂತ್ರಿಸಲು ಬೇರಿಯಂ ಲವಣಗಳು ಮತ್ತು ಇತರ ನಿಷೇಧಿತ ರಾಸಾಯನಿಕಗಳನ್ನು ಒಳಗೊಂಡಿರುವ ಪಟಾಕಿಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಭಾರತದ ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಹಸಿರು ಪಟಾಕಿ ಬಳಕೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದ್ದರಿಂದ, ನಾವು ಈ ಹೇಳಿಕೆಯನ್ನು ಸಂದರ್ಭದಿಂದ ಹೊರಗಿಡಲಾಗಿದೆ ಎಂದು ಗುರುತಿಸುತ್ತೇವೆ.

(ಅನುವಾದಿಸಿದವರು: ಅಂಕಿತಾ ಕುಲಕರ್ಣಿ)

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0 ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ